ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಿರುವ 05 ಯೋಜನೆಗಳಾದ ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ,
ಧನಶ್ರೀ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.