ರಾಜ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ವಿಕಲಚೇತನರ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ ಸಂಸ್ಥೆಗಳು, ವಿಶೇಷ ಶಿಕ್ಷಕರು ಹಾಗೂ ವ್ಯಕ್ತಿಗಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು .10 ವರೆಗೆ ವಿಸ್ತರಿಸಲಾಗಿದೆ.

ಆಸಕ್ತರು ಜಿಲ್ಲಾ ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಪೂರ್ಣ ವಿವರವನ್ನು ಕನ್ನಡದಲ್ಲಿಯೇ ಭರ್ತಿ ಮಾಡಿ, ಅರ್ಜಿ ನಮೂನೆ ಹಾಗೂ ಪ್ರಸ್ತಾವನೆಯನ್ನು ದ್ವಿ ಪ್ರತಿಯಲ್ಲಿ ನಗರದ ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರದ ವಿಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಗೆ ಸಲ್ಲಸಬೇಕು.

- Advertisement - 

ತಡವಾಗಿ ಬಂದಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ. ಹೆಚ್ಚಿನ ದೂರವಾಣಿ ಸಂಖ್ಯೆ 08194-235284 ಕರೆ ಮಾಡಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

- Advertisement - 

Share This Article
error: Content is protected !!
";