ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ..

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯೂರು ತಾಲ್ಲೂಕಿನ ಕಸಬಾ ಹೋಬಳಿಯ ಹುಚ್ಚವ್ವನಹಳ್ಳಿ, ಹಿರಿಯೂರು ಹಾಗೂ ಜೆ.ಜಿ.ಹಳ್ಳಿ ಹೋಬಳಿಯ ಕಾಟನಾಯಕನಹಳ್ಳಿ ಕಂದಾಯ ವೃತ್ತಗಳ ಗ್ರಾಮ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟೆಂಬರ್ 9 ರವರೆಗೆ ವಿಸ್ತರಿಸಲಾಗಿದೆ.
ಗ್ರಾಮ ಸಹಾಯಕ ಹುದ್ದೆಯು ತಾತ್ಕಾಲಿಕ ಹುದ್ದೆಯಾಗಿದ್ದು, ಸರ್ಕಾರದಿಂದ ಕಾಲಕಾಲಕ್ಕೆ ನಿಗದಿಯಾಗುವಂತಹ ಗೌರವಧನ ಪಾವತಿಸಲಾಗುವುದು. ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನೇಮಕಾತಿಗೆ ಕ್ರಮವಹಿಸಲಾಗುವುದು.
ಅರ್ಹತೆಗಳು: ನಿಗದಿತ ನಮೂನೆ-1ರಲ್ಲಿ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ 25 ವರ್ಷಗಳು ಪೂರ್ಣಗೊಂಡಿರಬೇಕು. ಅಕ್ಷರಸ್ಥರಾಗಿರುವ ಬಗ್ಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸುವುದು. ಸಾಮಾನ್ಯ ಕಂಪ್ಯೂಟರ್ ಸಾಕ್ಷರತೆಯ ತರಬೇತಿ ಪಡೆದಿರುವ ಕುರಿತು ಪ್ರಮಾಣ ಪತ್ರ ಲಗತ್ತಿಸುವುದು. ಈ ಹಿಂದೆ ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳಲ್ಲಿ ಕರ್ತವ್ಯ ನಿರ್ವಹಿಸಿದ ಕೆಳಮಟ್ಟದ ಗ್ರಾಮ ನೌಕರರ ವಂಶಸ್ಥರಿಗೆ ಆದ್ಯತೆ ನೀಡಲಾಗುವುದು. ಕೆಳಮಟ್ಟದ ನೌಕರರ ವಂಶಸ್ಥರೆಂಬುವ ಬಗ್ಗೆ ದಾಖಲೆ ಲಗತ್ತಿಸುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೊದಲನೇ ಆದ್ಯತೆ ನೀಡಲಾಗುವುದು. ಕ್ರಿಮಿನಲ್ ಮೊಕದ್ದಮೆ ಹಿನ್ನಲೆಯುಳ್ಳವರಾಗಿರಬಾರದು. ಕಂದಾಯ ವೃತ್ತಕ್ಕೆ ಸೇರಿದ ಗ್ರಾಮಗಳ ನಿವಾಸಿಯಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ಹಿರಿಯೂರು ತಹಶೀಲ್ದಾರ್ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon