ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಾದ ಉದ್ಯೋಗಿನಿ, ಚೇತನ, ಧನಶ್ರೀ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ
ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಕೆ ಅವಧಿಯನ್ನು 2026ರ ಜನವರಿ 15 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಅಭ್ಯರ್ಥಿಗಳು ನಿಗಧಿತ ಅವಧಿಯೊಳಗೆ ಅರ್ಜಿ ಸಲ್ಲಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

