ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2024-25
ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿಕಾರ್ಯಕ್ರಮಕ್ಕೆ ಹಾಗೂ ಪ್ರವರ್ಗ1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಇದೇ ಡಿ.20 ರವರೆಗೆ ವಿಸ್ತರಿಸಲಾಗಿದೆ.

- Advertisement - 

ಜಿಲ್ಲೆಯ ಅರ್ಹ ವಿದ್ಯಾರ್ಥಿಗಳು https://ssp.postmatric.karnataka.gov.in   ವೆಬ್ಸೈಟ್ ಮೂಲಕ ಅರ್ಜಿ  ಸಲ್ಲಿಸಬಹುದು.
ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in  ವೆಬ್ಸೈಟ್ ಸಂಪರ್ಕಿಸಬಹುದು.

- Advertisement - 

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ 8050770005 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";