ಶಿಷ್ಯವೇತನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸಕ್ತ ಸಾಲಿನಲ್ಲಿ ಒಂದನೇ ತರಗತಿಯಿಂದ ಅಂತಿಮ ವರ್ಷದ ಪದವಿ
, ಡಿಪ್ಲೋಮಾ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕರ್ನಾಟಕ ಮೂಲ ನಿವಾಸಿ ಮಾಜಿ ಸೈನಿಕರ ಮಕ್ಕಳ ಶಿಷ್ಯವೇತನಕ್ಕಾಗಿ ಅರ್ಜಿ ಸಲ್ಲಿಸುವ ದಿನಾಂಕವನ್ನು ಜನವರಿ 15 ರವರೆಗೆ ವಿಸ್ತರಿಸಲಾಗಿದೆ.

      ಕೇಂದ್ರಿಯ ಸೈನಿಕ ಮಂಡಳಿ ಮತ್ತು ಇತರೆ ಸರ್ಕಾರಿ ಮೂಲಗಳಿಂದ ಯಾವುದೇ ಶಿಷ್ಯವೇತನವನ್ನು ಪಡೆಯದಿರುವ ಮಾಜಿ ಸೈನಿಕರ ಮಕ್ಕಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

- Advertisement - 

      ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಯಲ್ಲಿ ಶುಲ್ಕ ರಹಿತ ಅರ್ಜಿಗಳನ್ನು ವಿತರಿಸಲಾಗುತ್ತಿದ್ದು, ಭರ್ತಿ ಮಾಡಿದ ಅರ್ಜಿಗಳನ್ನು ಜ.15 ರೊಳಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಕಚೇರಿಗೆ ಸಲ್ಲಿಸಲು ಕೋರಿದೆ.

      ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-220925 ಗೆ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.

- Advertisement - 

Share This Article
error: Content is protected !!
";