ವಾಣಿ ವಿಲಾಸ ಸಾಗರ ಸಮೀಪದ ಯಾತ್ರಿ ನಿವಾಸ ಹಸ್ತಾಂತರ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರ ಮಾರಿಕಾಂಬ ದೇವಸ್ಥಾನದ ಮುಂಭಾಗದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ರೂ.5 ಕೋಟೆ ವೆಚ್ಚದಲ್ಲಿ ನಿರ್ಮಿಸಲಾಗಿರುವ ಯಾತ್ರಿನಿವಾಸ, ಉದ್ಯಾನವನಗಳ ಜೊತೆಗೆ ಶೌಚಾಲಯಗಳನ್ನು ನಿರ್ಮಿಸಲಾಗಿದೆ.

- Advertisement - 

  ಕಟ್ಟಡಗಳನ್ನು ಖಾಸಗಿ ಸಂಸ್ಥೆಗಳು ಹಸ್ತಾಂತರಿಸಿಕೊಳ್ಳಲು ಇಚ್ಚಿಸಿದ್ದಲ್ಲಿ, ಪ್ರವಾಸೋದ್ಯಮ ಇಲಾಖೆಗೆ ಆಸಕ್ತಿಯ ಅಭಿವ್ಯಕ್ತ” Expression  of Interest (EOI) ಸಲ್ಲಿಸುವಂತೆ ಸೆಪ್ಟೆಂಬರ್2024 ಮಾಹೆಯ ಮೊದಲ ವಾರದಲ್ಲಿ ಅರ್ಜಿ ಸಲ್ಲಿಸುವಂತೆ ಕೋರಲಾಗಿರುತ್ತದೆ. ಆದರೆ ಇಲ್ಲಿಯವರೆಗೂ ಯಾವುದೇ ಅರ್ಜಿಗಳು ಸ್ವೀಕೃತವಾಗಿರುವುದಿಲ್ಲ.

- Advertisement - 

ಹಾಗಾಗಿ ಅರ್ಜಿ ಸಲ್ಲಿಕೆ ಅವಧಿಯನ್ನು 2024 ನವೆಂಬರ್ 11 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಕಾಮನಬಾವಿ ಬಡಾವಣೆ, ಕೋಟೆ ಸಮೀಪದ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";