ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2024-25
ನೇ ಶೈಕ್ಷಣಿಕ ಸಾಲಿನ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನ ಜ್ಯೋತಿ ಸೆಂಟ್ರಲ್ ಕಾಲೇಜು ಆವರಣದ ಸ್ನಾತಕೋತ್ತರ ವಿಭಾಗಗಳು ಮತ್ತು ಸಂಯೋಜಿತ ಕಾಲೇಜುಗಳ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ 2024ನೇ ಸೆಪ್ಟೆಂಬರ್ 20 ಕೊನೆಯ ದಿನಾಂಕ ನಿಗಧಿಪಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳ ಮನವಿಯ ಮೇರೆಗೆ ದಿನಾಂಕವನ್ನು ಮುಂದೂಡಲಾಗಿದೆ.


ದಂಡ ಶುಲ್ಕವಿಲ್ಲದೆ ಅರ್ಜಿಗಳನ್ನು ಸಲ್ಲಿಸಲು 2024ನೇ ಸೆಪ್ಟೆಂಬರ್ 30 ಹಾಗೂ ರೂ.200/- ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 05 ಕೊನೆಯ ದಿನಾಂಕವಾಗಿರುತ್ತದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

 

- Advertisement -  - Advertisement - 
Share This Article
error: Content is protected !!
";