ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕ ಸೇವಾ ಆಯೋಗವು ಅಧಿಸೂಚಿಸಿರುವ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 + 42 (ಹೈ.ಕ) ಹಾಗೂ ಸಹಾಯಕ ಕೃಷಿ ಅಧಿಕಾರಿ 586 + 231 (ಹೈ.ಕ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2025 ಫೆಬ್ರವರಿ 05 ಕೊನೆಯ ದಿನಾಂಕವನ್ನು ನಿಗದಿಪಡಿಸಲಾಗಿತ್ತು.
ಆದರೆ ಕೆಲವು ಅಭ್ಯರ್ಥಿಗಳು ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಕೊನೆಯ ದಿನಾಂಕವನ್ನು ವಿಸ್ತರಿಸುವಂತೆ ಕೋರಿರುತ್ತಾರೆ. ಈ ಸಂಬಂಧ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ಅವಧಿಯನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ 2025 ರ ಫೆಬ್ರವರಿ 5 ರ ತಿದ್ದಪಡಿ ಅಧಿಸೂಚನೆಯನ್ನು ನೋಡಬಹುದಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.