ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡ್ರಗ್ಸ್ ಮಾಫಿಯಾ ನಿಯಂತ್ರಣದಲ್ಲಿ ಕಾಂಗ್ರೆಸ್ ಸರ್ಕಾರದ ವೈಫಲ್ಯ, ಪ್ರಾಮಾಣಿಕ ಅಧಿಕಾರಿಗಳ ಮೇಲೆ ನಡೆಯುತ್ತಿರುವ ಗೂಂಡಾಗಿರಿ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಕಮಿಷನ್ ದಂಧೆ ಸೇರಿದಂತೆ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು
ತಾಂಡವವಾಡುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಉಪಸ್ಥಿತರಿದ್ದರು.

