ಫೇಸ್‍ಬುಕ್ ಸ್ಟೇಟಸ್‍ನಲ್ಲಿ ಸುಳ್ಳು ಸುದ್ದಿ: ಪ್ರಕರಣ ದಾಖಲು

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಮೆರವಣಿಗೆ ಬೃಹತ್ ಶೋಭಾಯಾತ್ರೆಯಲ್ಲಿ 9 ಡಿಜೆ ಗಳು ಭಾಗವಹಿಸಲಿವೆ ಎಂಬುದಾಗಿ ಸುಳ್ಳು ಸುದ್ದಿಯನ್ನು ಫೇಸ್‍ಬುಕ್ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿಸಿದಕ್ಕಾಗಿ ಮಂಜುನಾಥ್ ಎಂಬಾತನ ವಿರುದ್ಧ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಚಿತ್ರದುರ್ಗ ನಗರದಲ್ಲಿ ಸೆ.13 ರಂದು ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆ ಸಂದರ್ಭದಲ್ಲಿ ಘರ್ಜಿಸಲು 9 DJ ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆಎಂದು ಸ್ಟೇಟಸ್ ಹಾಕಿದ್ದನು.  ಈಗಾಗಲೇ ಜಿಲ್ಲಾಧಿಕಾರಿಗಳು ಗಣಪತಿ ವಿಸರ್ಜನೆ ಹಾಗೂ ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿ.ಜೆ. ಬಳಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

- Advertisement - 

ಆದರೆ ಮೊಳಕಾಲ್ಮೂರು ತಾಲ್ಲೂಕಿನ ಕೊಂಡ್ಲಹಳ್ಳಿ ಗ್ರಾಮದ ಆರ್.ಮಂಜುನಾಥ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಐಡಿ  manju achar prince   ನಲ್ಲಿ ಇತಿಹಾಸ ಸೃಷ್ಠಿಸಲು ಸಿದ್ದವಾಗಿದೆ ಚಿತ್ರದುರ್ಗ ಬೃಹತ್ ಶೋಭಾಯಾತ್ರೆ, 13-09-2025 ಶನಿವಾರ ಪ್ರಪಥಮ ಬಾರಿಗೆ ಚಿತ್ರದುರ್ಗ ಹಿಂದೂ ಮಹಾಗಣಪತಿ ಬೃಹತ್ ಶೋಭಾಯಾತ್ರೆಗೆ ಘರ್ಜಿಸಲು 9 ಆಎ  ಮುಂಬೈ, ಬೆಳಗಾವಿ, ಹುಬ್ಬಳ್ಳಿ ಹಾಗೂ ಇನ್ನೂ ಹೆಸರಾಂತ 9 ಡಿಜೆಗಳು ಭಾಗವಹಿಸಲಿವೆಎಂಬುದಾಗಿ ಸ್ಟೇಟಸ್ ಹಾಕಿದ್ದನು.

ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಜನರು ಡಿಜೆ ಬಳಸುವಂತೆ ಪ್ರಚೋದನೆ ಮಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತ ಕೆಲಸ ಮಾಡಿದ್ದಾನೆ.  ಈ ಹಿನ್ನಲೆಯಲ್ಲಿ ಮೊಳಕಾಲ್ಮೂರು ಪೊಲೀಸ್ ಠಾಣೆ ಆರ್.ಮಂಜುನಾಥ ವಿರುದ್ದ ಬಿ.ಎನ್.ಎಸ್.ಎಸ್-2023 ರಿತ್ಯಾ ಕಲಂ 126(2) ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement - 

ಜಿಲ್ಲಾಡಳಿತ ಶೋಭಾಯಾತ್ರೆ ಮರವಣಿಗೆಯಲ್ಲಿ ಯಾವುದೇ ಡಿ.ಜೆ. ಬಳಕೆಗೆ ಅನುಮತಿ ನೀಡಿರುವುದಿಲ್ಲ. ಸಾರ್ವಜನಿಕರು ಸಾಮಾಜಿಕ ಜಾಲ ತಾಣಗಳಲ್ಲಿನ ಸುಳ್ಳು ಸುದ್ದಿಗಳ ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕು. ಯಾವುದೇ ಕಾರಣಕ್ಕೂ ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಾರದು ಎಂದು ಮನವಿ ಮಾಡಲಾಗಿದೆ.

 

 

 

Share This Article
error: Content is protected !!
";