ಖ್ಯಾತ ನಟ ಹರೀಶ್ ರಾಯ್ ಇನ್ನಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡ ಚಿತ್ರರಂಗದ ಖ್ಯಾತ ನಟ ಹರೀಶ್ ರಾಯ್(55) ಗುರುವಾರ
ಕ್ಯಾನ್ಸರ್​​ನಿಂದ ನಿಧನರಾಗಿದ್ದಾರೆ. ಅವರು ಮೂಲತಃ ಉಡುಪಿಯವರಾಗಿದ್ದು, ಉಡುಪಿಯ ಅಂಬಲಪಾಡಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಬೆಂಗಳೂರಿನ ನಿವಾಸದಿಂದ ಮಧ್ಯಾಹ್ನದ ನಂತರ ಹರೀಶ್ ರಾಯ್ ಅವರ ಪಾರ್ಥಿವ ಶರೀರ ಉಡುಪಿಗೆ ರವಾನಿಸಲಾಗಿದೆ.
ಹಲವಾರು ಸಿನಿಮಾಗಳಲ್ಲಿ ಖಳನಟನಾಗಿ
, ಪೋಷಕ ನಟನಾಗಿ ಅಭಿನಯಿಸಿ ಖ್ಯಾತಿ ಗಳಿಸಿದ್ದ ಹರೀಶ್ ರಾಯ್ ಅವರು ಇನ್ನೂ ನೆನಪು ಮಾತ್ರ.

- Advertisement - 

ಹರೀಶ್ ರಾಯ್ ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಚಿತ್ರರಂಗದವರು ಸಹಾಯ ಮಾಡಿದ್ದರು. ಆದರೂ ಕೂಡ ಹರೀಶ್ ರಾಯ್ ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಚಿಕಿತ್ಸೆ ಫಲಿಸದೇ ಹರೀಶ್ ರಾಯ್ ನಿಧನರಾದರು.

ಬೆಂಗಳೂರಿನಲ್ಲಿ ವಾಸವಾಗಿದ್ದ ಹರೀಶ್ ರಾಯ್ ಅವರ ಮೂಲ ಹೆಸರು ಹರೀಶ್ ಆಚಾರ್ಯ. ಅಂಬಲಪಾಡಿಯಲ್ಲಿ ಇರುವ ಮನೆಯಲ್ಲಿ ಅವರ ತಾಯಿ ಮತ್ತು ಸಹೋದರ ವಾಸವಾಗಿದ್ದಾರೆ. ಅಂಬಲಪಾಡಿಯಲ್ಲೇ ಅಂತ್ಯಕ್ರಿಯೆ ನಡೆಸಲು ಕುಟುಂಬದವರು ತೀರ್ಮಾನಿಸಿದ್ದಾರೆ.

- Advertisement - 

ಹರೀಶ್ ರಾಯ್ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಲ್ಲಿರುವ ಅಂಜನಾಪುರದ ಮನೆ ಬಳಿ ಎರಡು ಗಂಟೆಗಳ ಕಾಲ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿತ್ತು.

ನವೆಂಬರ್-7 ಶುಕ್ರವಾರ ಉಡುಪಿಯಲ್ಲಿ ಹರೀಶ್ ರಾಯ್ ಅಂತ್ಯ ಸಂಸ್ಕಾರ ನಡೆಯಲಿದೆ. ಉಡುಪಿಯಲ್ಲಿ ಸ್ವರ್ಣೋದ್ಯಮ ನಡೆಸುವ ಕುಟುಂಬಕ್ಕೆ ಹರೀಶ್ ರಾಯ್ ಸೇರಿದವರು.

ಪಾರ್ಥಿವ ಶರೀರ ಬೆಂಗಳೂರಿನಿಂದ ಉಡುಪಿಗೆ ಬಂದ ಬಳಿಕ ಅಂತಿಮ ಸಂಸ್ಕಾರಕ್ಕೆ ಕುಟುಂಬದವರು ಸಿದ್ಧತೆ ಮಾಡಿಕೊಳ್ಳಲಿದ್ದಾರೆ. ನಿಧನದ ಬಳಿಕ ಅಂಗಾಂಗ ದಾನ ಮಾಡಬೇಕು ಎಂಬುದು ಹರೀಶ್ ರಾಯ್ ಅವರ ಆಶಯ ಆಗಿತ್ತು. ತಮ್ಮ ಸಾವಿನ ನಂತರ ಬೇರೆಯವರಿಗೆ ಅನುಕೂಲ ಆಗಲಿ ಎಂಬ ಉದ್ದೇಶ ಅವರಿಗೆ ಇತ್ತು. ಆ ಬಗ್ಗೆ ಪತ್ನಿ ಬಳಿ ಅವರು ಹೇಳಿಕೊಂಡಿದ್ದರು. ಆದರೆ ಕ್ಯಾನ್ಸರ್ ಇದ್ದ ಕಾರಣದಿಂದ ಅಂಗಾಗಗಳನ್ನು ತೆಗೆದುಕೊಳ್ಳಲು ಆಗುವುದಿಲ್ಲ ಎಂದು ವೈದ್ಯರು ಹೇಳಿದ್ದಾರೆ.

ಪತ್ನಿ ಆರತಿ ಹಾಗೂ ಮಗ ರೋಷನ್ ಅವರು ಆಸ್ಪತ್ರೆಯ ಮುಂಭಾಗ ಕಣ್ಣೀರು ಹಾಕಿದರು. ಹರೀಶ್ ರಾಯ್ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಹರೀಶ್ ರಾಯ್ ಅವರ ಚಿಕಿತ್ಸೆಗೆ ಕನ್ನಡ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ನೆರವಾಗಿದ್ದರು. ಅದರಿಂದ ಹರೀಶ್ ರಾಯ್ ಅವರಿಗೆ ಸಹಾಯ ಆಗಿತ್ತು. ಹಾಗಿದ್ದರೂ ಕೂಡ ಅವರು ಕ್ಯಾನ್ಸರ್ ವಿರುದ್ಧ ಹೋರಾಡಿ ಗೆಲ್ಲಲು ಸಾಧ್ಯವಾಗಲಿಲ್ಲ.

 

 

Share This Article
error: Content is protected !!
";