ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ

News Desk

ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಇನ್ನಿಲ್ಲ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು: ಕನ್ನಡದ ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ಅವರ ನಿಧನಕ್ಕೆ ಸಂತಾಪ ಕೋರುವೆ. ಕನ್ನಡ ಸಾಹಿತ್ಯದ ಪ್ರಮುಖ ಕವಿಯಾಗಿ, ನಾಟಕಕಾರರಾಗಿ, ವಿಮರ್ಶಕರಾಗಿ ಹಾಗೂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಎಚ್ಎಸ್‌ವಿ ಅವರು ಕವಿತೆ,

ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಸೇರಿದಂತೆ ಹಲವು ಪ್ರಕಾರಗಳಲ್ಲಿ ಸಾಹಿತ್ಯ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡುವ ಮೂಲಕ 100ಕ್ಕೂ ಹೆಚ್ಚು ಕನ್ನಡ ಕೃತಿಗಳನ್ನು ರಚಿಸಿದ್ದಾರೆ.

ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸುವಲ್ಲಿ ತಮ್ಮನ್ನು ತಪಸ್ವಿಯಂತೆ ಸಮರ್ಪಿಸಿಕೊಂಡಿದ್ದ ಅವರು 85ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಾನ್ಯ ಎಚ್.ಎಸ್. ವೆಂಕಟೇಶಮೂರ್ತಿ ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗದವರು ಹಾಗೂ ಅವರ ಸಾಹಿತ್ಯಾಭಿಮಾನಿಗಳಿಗೆ ಅಗಲಿಕೆಯ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಎಚ್ಎಸ್‌ವಿ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ರಾಜಕೀಯ ಪಕ್ಷಗಳ ನಾಯಕರು ಪ್ರಾರ್ಥಿಸಿದ್ದಾರೆ.

Share This Article
error: Content is protected !!
";