ಇಂದು ಕುಲಪತಿ ಪ್ರೊ.ಬಿ.ಕೆ ರವಿ ರವರಿಗೆ ಬೀಳ್ಕೊಡುಗೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜನವರಿ 31 ರಂದು ಬೆಂಗಳೂರು ವಿವಿಯಲ್ಲಿ ಹಿರಿಯ ಪ್ರಾಧ್ಯಾಪಕ, ಕೊಪ್ಪಳ ವಿವಿ ಕುಲಪತಿ ಪ್ರೊ. ಬಿ.ಕೆ ರವಿ ರವರ ಬೀಳ್ಕೊಡುಗೆ ಸಮಾರಂಭ ಬೆಂಗಳೂರು, ಜನವರಿ 30: ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಹಿರಿಯ ಪ್ರಾಧ್ಯಾಪಕರು, ಪ್ರಸ್ತುತ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾಗಿ ಸೇವೆ ಸಲ್ಲಿಸುತ್ತಿರುವ ಡಾ. ಬಿ.ಕೆ.ರವಿ ರವರು 2025 ಜನವರಿ 31 ರಂದು ವಯೋ ನಿವೃತ್ತಿ ಹೊಂದುತ್ತಿರುವ ಅಂಗವಾಗಿ

ವಿದ್ಯಾರ್ಥಿಗಳ ನೆಚ್ಚಿನ ರವಿ ಮೇಸ್ಟ್ರಿಗೆ ಬೆಂಗಳೂರು ವಿವಿಯ, ಸಂವಹನ ವಿಭಾಗದ ಅಧ್ಯಾಪಕ ವೃಂದ, ಸಂಶೋಧನಾರ್ಥಿಗಳು ಹಾಗೂ ವಿದ್ಯಾರ್ಥಿಗಳಿಂದ ಜನವರಿ 31 ರಂದು ಬೆಳಿಗ್ಗೆ 11.00 ಗಂಟೆಗೆ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿರುವ ಪ್ರೊ. ವೆಂಕಟಗಿರಿಗೌಡ ಮೆಮೋರಿಯಲ್ ಆಡಿಟೋರಿಯಂನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದ ಉಪ ಕುಲಪತಿ ಪ್ರೊ. ಡಾ. ಜಯಕರ ಶೆಟ್ಟಿ ಎಂ. ಅವರು ಪ್ರೋ. ಬಿ.ಕೆ ರವಿ ಅವರ ಬೀಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾದ ಆಯೇಷಾ ಖಾನುಂ, ರವಿ ಕುಮಾರ್, ಮುಖ್ಯಸ್ಥರು, ನ್ಯೂಸ್ ಫರ್ಸ್ಟ್ ಅವರು ಕಾರ್ಯಕ್ರಮದಲ್ಲಿ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವ ಶೈಖ್ ಲತೀಫ್, ಮೌಲ್ಯಮಾಪನ ವಿಭಾಗದ ಕುಲಸಚಿವ ಪ್ರೊ. ಶ್ರೀನಿವಾಸ್ ಚೌಡಪ್ಪ, ಹಣಕಾಸು ವಿಭಾಗದ ಅಧಿಕಾರಿ ಡಾ. ಸುನೀತಾ ಎಂ. ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದ ಮುಖ್ಯಸ್ಥರಾದ ಡಾ. ಬಿ. ಶೈಲಶ್ರೀ, ಸೇರಿದಂತೆ ವಿವಿಧ ವಿಶ್ವವಿದ್ಯಾಲಯಗಳ ಅಧ್ಯಾಪಕರು, ಸಂವಹನ ವಿಭಾಗದ ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";