ಚಂದ್ರವಳ್ಳಿ ನ್ಯೂಸ್, ತುಮಕೂರು:
ರೈತರ ಹಿತ ಕಾಪಾಡುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ ಧೋರಣೆ ಹಾಗೂ ಯೂರಿಯಾ ಮತ್ತು ಡಿಎಪಿ ರಸಗೊಬ್ಬರಗಳನ್ನು ವಿತರಿಸದೆ ಅನ್ನದಾತರಿಗೆ ಅನ್ಯಾಯ ಎಸಗುತ್ತಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು ಎಂದು ಜೆಡಿಎಸ್ ತಿಳಿಸಿದೆ.
ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಆರ್.ಸಿ. ಅಂಜನಪ್ಪ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ತಿಪಟೂರು ಕ್ಷೇತ್ರದ ಮುಖಂಡ ಶಾಂತಕುಮಾರ್, ಗುಬ್ಬಿ ಮುಖಂಡ ನಾಗರಾಜ್ ,
ಸಿರಾ ಮುಖಂಡ ಉಗ್ರೇಶ್, ಕುಣಿಗಲ್ ಜಗದೀಶ್ ನಾಗರಾಜಯ್ಯ ಸೇರಿದಂತೆ ತಾಲ್ಲೂಕ್ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

