ಚಂದ್ರವಳ್ಳಿ ನ್ಯೂಸ್, ಹೊಸಕೋಟೆ:
ಕೆಎಸ್ಆರ್ಟಿಸಿ ಬಸ್ ಹಾಗೂ ಕ್ಯಾಂಟರ್ ಮಧ್ಯ ಸಂಭವಿಸಿದ ಅಪಘಾತದಲ್ಲಿ ಬಸ್ನಲ್ಲಿದ್ದ 8 ಮಂದಿ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ-ಕೋಲಾರ ರಾಷ್ಟ್ರೀಯ ಹೆದ್ದಾರಿ ಪಕ್ಕದ ಎಂವಿಜೆ ಆಸ್ಪತ್ರೆ ಬಳಿ ಜರುಗಿದೆ.
ಅಪಘಾತದಲ್ಲಿ ಗಾಯಾಳುಗಳಿಗೆ ಹೊಸಕೋಟೆಯ ಆಸ್ವತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕ್ಯಾಂಟರ್ ಹಾಗೂ ಬಸ್ನ ಮುಂಭಾಗ ನಜ್ಜುಗುಜ್ಜಾಗಿದೆ.

