ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂಟರ್ನೆಟ್ ಅನ್ನು ಸುರಕ್ಷಿತವಾಗಿ ಮತ್ತು ಜವಾಬ್ದಾರಿಯುತವಾಗಿ ಬಳಸುವುದನ್ನು ಉತ್ತೇಜಿಸಿ, ವಿಶೇಷವಾಗಿ ಮಕ್ಕಳು, ಮಹಿಳೆಯರು ಮತ್ತು ಯುವಕರಲ್ಲಿ ಜಾಗೃತಿ ಮೂಡಿಸಲು ಫೆ. 10 ರಂದು ವಿಶ್ವಾದ್ಯಂತ ಸುರಕ್ಷಿತ ಇಂಟರ್ನೆಟ್ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಕಾರ್ಯಕ್ರಮ ಫೆ. 10 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಇಂಟರ್ನೆಟ್ನ ಸುರಕ್ಷಿತ ಮತ್ತು ಜವಾಬ್ದಾರಿಯುತ ಬಳಕೆಯನ್ನು ಉತ್ತೇಜಿಸಿ, ವಿಶೇಷವಾಗಿ ಮಕ್ಕಳು, ಮಹಿಳೆಯರು ಮತ್ತು ಯುವಕರಲ್ಲಿ ಇಂಟರ್ನೆಟ್ ಅನ್ನು ಸುರಕ್ಷಿತವಾಗಿ ಬಳಸುವ ಕುರಿತಂತೆ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ಸಚಿವಾಲಯವು “ಉತ್ತಮ ಇಂಟರ್ನೆಟ್ಗಾಗಿ ಒಂದಾಗಿ” ಎಂಬ ಘೋಷವಾಕ್ಯದಡಿ ಕಾರ್ಯಕ್ರಮವನ್ನು ಈ ಬಾರಿ ಆಯೋಜಿಸಲಾಗುತ್ತಿದೆ. ಸುರಕ್ಷಿತವಾಗಿ ಆನ್ಲೈನ್ನಲ್ಲಿ ವೈವಿಧ್ಯಮಯ ಇಂಟರ್ನೆಟ್ ಬಳಕೆದಾರರಿಗೆ ಜಾಗೃತಿ ಮತ್ತು ಶಿಕ್ಷಣ ನೀಡುವ ಗುರಿಯನ್ನು ಇದು ಹೊಂದಿದೆ. ಸೈಬರ್ ನೈರ್ಮಲ್ಯ, ಪ್ರಮುಖ ಸೈಬರ್ ಬೆದರಿಕೆಗಳು, ಸೈಬರ್ ವಂಚನೆಗಳನ್ನು ಪರಿಣಾಕಾರಿಯಾಗಿ ತಡೆಗಟ್ಟುವುದು ಕೂಡ ಪ್ರಮುಖ ಉದ್ದೇಶವಾಗಿದೆ. ನಾಗರೀಕರಲ್ಲಿ ಇಂಟರ್ನೆಟ್ ಹಾಗೂ ತಂತ್ರಜ್ಞಾನ ಬಳಸುವಾಗ ಜವಾಬ್ದಾರಿಯುತವಾಗಿ ನಿರ್ವಹಿಸಿ ಇಂಟರ್ನೆಟ್ ಬಳಕೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ.
ಎನ್ಐಸಿ ಯು ದೇಶದಾದ್ಯಂತ ಸುಮಾರು 700 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ತಾಂತ್ರಿಕ ತಜ್ಞರೊಂದಿಗೆ ಕಾರ್ಯ ನಿರ್ವಹಿಸುತ್ತಿದೆ. ಈ ನಿಟ್ಟಿನಲ್ಲಿ ಎಲ್ಲ ಹಂತಗಳಲ್ಲಿ ಸುರಕ್ಷಿತ ಇಂಟರ್ಮೆಟ್ ಅಭ್ಯಾಸಗಳು. ಸೈಬರ್ ನೈರ್ಮಲ್ಯವನ್ನು ಉತ್ತೇಜಿಸಲು ಹಾಗೂ ಜಾಗೃತಿ ಮೂಡಿಸಲು ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.
ಸುರಕ್ಷಿತ ಇಂಟರ್ನೆಟ್ ದಿನದ ಕಾರ್ಯಕ್ರಮ ಫೆ. 11 ರಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ, ಜಿಲ್ಲಾ ಎನ್ಐಸಿ ಅಧಿಕಾರಿ ಶಾಸ್ತ್ರಿ ಮುಂತಾದವರು ಭಾಗವಹಿಸುವರು.