ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ರಾಜ್ಯ ಸರ್ವ ಶಿಕ್ಷಣ ಅಭಿಯಾನದ ನಿವೃತ್ತ ನಿರ್ದೇಶಕ ಎಂ.ಮಲ್ಲಣ್ಣನವರ ನಿವಾಸದಲ್ಲಿ ನಿವೃತ್ತ ಶಿಕ್ಷಕರುಗಳಾದ ಯಲ್ಲಪ್ಪ, ನುಂಕಪ್ಪ, ತಿಪ್ಪೇಸ್ವಾಮಿ
ಉಪನ್ಯಾಸಕ ನಾಗರಾಜ್ ಬೊಮ್ಮೇನಹಳ್ಳಿ ಹಾಗೂ ನಿವೃತ್ತ ಶಿಕ್ಷಕ, ಸಾಹಿತಿ ಪರಶುರಾಮ್‌ಗೊರಪ್ಪ ದಂಪತಿಗಳನ್ನು ಸನ್ಮಾನಿಸಲಾಯಿತು.
ನಿವೃತ್ತ ಶಿಕ್ಷಕ ದಂಪತಿಗಳನ್ನು ಸನ್ಮಾನಿಸಿ ಮಾತನಾಡಿದ ಎಂ.ಮಲ್ಲಣ್ಣ ಶಿಕ್ಷಣದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಲು ಸಾಧ್ಯ. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟಕ್ಕೆ ಒತ್ತು ಕೊಟ್ಟಿದ್ದರು. ಅವರ ಆಚಾರ-ವಿಚಾರ, ತತ್ವ ಸಿದ್ದಾಂತಗಳನ್ನು ಪಾಲಿಸಿ ಪ್ರತಿಯೊಬ್ಬರು ಶಿಕ್ಷಣವಂತರಾದಾಗ ಮಾತ್ರ ಸಂವಿಧಾನದ ಆಶಯಗಳು ಈಡೇರಿದಂತಾಗುತ್ತದೆ ಎಂದರು.
ಕಣಿವೆಮಾರಮ್ಮ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ ಬೆಳಗಟ್ಟ, ಲೇಖಕ ಹೆಚ್.ಆನಂದ್‌ಕುಮಾರ್, ಯಶೋಧಮ್ಮ, ರತ್ನಮ್ಮ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.