ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ಉಪನ್ಯಾಸ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ 

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಭಾರತ ದೇಶದಲ್ಲಿ
  ಮೊಟ್ಟಮೊದಲ ಬಾರಿಗೆ ಪ್ರಜಾಪ್ರತಿನಿಧಿ  ಸ್ಥಾಪಿಸುವ ಮೂಲಕ  ಪ್ರಜಾಪ್ರಭುತ್ವದ ರೂವಾರಿಯಾದವರು  ನಾಲ್ವಡಿ ಕೃಷ್ಣರಾಜ ಒಡೆಯರ್ ಆಗಿದ್ದಾರೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕ್ಷೇತ್ರಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ತಿಳಿಸಿದರು.  

       ನಗರದ  ಎಂ.ಎ.ಬಿ.ಎಲ್ ಪ್ರೌಢಶಾಲೆಯಲ್ಲಿ   ಕನ್ನಡ ಜಾಗೃತ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು,   ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ  ಸಾಹಿತ್ಯ ವಿಜ್ಞಾನ ಸಂಸ್ಕೃತಿ ಸಮಾಗಮ 2025  ಕಾರ್ಯಕ್ರಮದಲ್ಲಿ ಟಿ. ಎಸ್.ಶಂಕರಯ್ಯ ಭಾಗವಹಿಸಿ ಮಾತನಾಡಿ  ನಾಲ್ವಡಿ ಕೃಷ್ಣರಾಜ ಒಡೆಯರ್  ಕುರಿತು ಉಪನ್ಯಾಸ   ನೀಡಿದರು,

- Advertisement - 

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕಾಲದಲ್ಲಿ  ಮೈಸೂರು ಸಂಸ್ಥಾನ ಸಮಗ್ರ ಅಭಿವೃದ್ಧಿ ಹೊಂದಿತು.  ಶಿಕ್ಷಣ, ಕೃಷಿ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರಗಳು ಮಹತ್ವದ ಸಾಧನೆಯನ್ನು ಮಾಡಿದವು. ಮೂಢನಂಬಿಕೆಗಳನ್ನು ತೊಡೆದು ಹಾಕುವ ಮೂಲಕ ಜನರಲ್ಲಿ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸಿದರು. ಮಹಿಳೆಯರಿಗೆ ಶಿಕ್ಷಣ, ಬಾಲ್ಯವಿವಾಹ ನಿಷೇಧ, ವಸತಿ ಶಾಲೆಗಳ  ಪ್ರಾರಂಭ, ಅಣೆಕಟ್ಟು ನಿರ್ಮಾಣ, ಆಧುನಿಕ ಕಾರ್ಖಾನೆಗಳ ಸ್ಥಾಪನೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪಿಸುವ ಮೂಲಕ‌ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದರು ಎಂದರು.

     ಆಧುನಿಕ ತಂತ್ರಜ್ಞಾನ ಎಂಬ ವಿಷಯ ಕುರಿತು ಉಪನ್ಯಾಸ ನೀಡಿದ  ಆರ್.ಎಲ್.ಜೆ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಕೆ.ಸುನೀಲ್ ಕುಮಾರ್  ಮಾತನಾಡಿ ವೈಜ್ಞಾನಿಕವಾಗಿ ಅಧ್ಯಯನ ಮಾಡುವ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಯೋಚನಾಶಕ್ತಿ ಬೆಳೆಯುತ್ತದೆ.  ನಮ್ಮ ದೇಶದವರು ವಿದೇಶಿ ತಂತ್ರಜ್ಞಾನವನ್ನು ಅವಲಂಬಿಸುವುದನ್ನು ನಿಲ್ಲಿಸಬೇಕು. ಯಾವುದೇ ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮುಂದುವರಿದರೆ ಮಾತ್ರ ಅಭಿವೃದ್ಧಿ ಸಾಧಿಸುತ್ತದೆ. ಆಧುನಿಕ‌ ತಂತ್ರಜ್ಞಾನದ ತಿಳುವಳಿಕೆ ಪಡೆಯುವುದರ ಜೊತೆಗೆ ವಿದ್ಯಾರ್ಥಿಗಳು ಹೊಸ ಹೊಸ ಆವಿಷ್ಕಾರ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕೆಂದರು.

- Advertisement - 

      ಕಾರ್ಯಕ್ರಮದಲ್ಲಿ  ಸ್ವಾಮಿ ವಿವೇಕಾನಂದ ಮತ್ತು ಎಂ.ಎ.ಬಿ.ಎಲ್ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ಎಂ.ಬಿ.ಗುರುದೇವ್,    ಕಾರ್ಯನಿರ್ವಾಹಕಣಾಧಿಕಾರಿ  ಬಿ.ಪಿ.ಪ್ರಿಯಾಂಕಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕನ್ನಡ ಜಾಗೃತ ಸಮಿತಿ ಸದಸ್ಯರುಗಳಾದ  ಕೆ.ಮಹಾಲಿಂಗಯ್ಯನಾಗರತ್ನಮ್ಮಭಾರತ್ ಸ್ಕೌಟ್ಸ್ ಮತ್ತು ಗೈಡ್ ಜಿಲ್ಲಾ ಸಹಾಯಕ ಆಯುಕ್ತ ವೆಂಕಟರಾಜು

ಕನ್ನಡ ಜಾಗೃತ ಪರಿಷತ್ತು ಕಾರ್ಯದರ್ಶಿ ಡಿ.ಪಿ.ಆಂಜನೇಯಜವಾಹರ ನವೋದಯ ವಿದ್ಯಾಲಯ ನಿವೃತ್ತ  ಶಿಕ್ಷಕ ವಿ.ಎಸ್.ಹೆಗಡೆ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್,   ಕಲಾವಿದರುಗಳಾದ ರಾಮಕೃಷ್ಣ, ದರ್ಗಾಜೋಗಿಹಳ್ಳಿ ಮಲ್ಲೇಶ್, ಮುನಿರತ್ನಮ್ಮ, ಹಾಡೋನಹಳ್ಳಿ ಗೋವಿಂದರಾಜು ಮುಂತಾದವರು ಭಾಗವಹಿಸಿದ್ದರು.

Share This Article
error: Content is protected !!
";