ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಮ್ಮ ಮತ – ನಮ್ಮ ಹಕ್ಕು! ನಮ್ಮ ಮತದಾರರ ಹಕ್ಕು, ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಆಗಸ್ಟ್ 5ರಂದು ಮತ ಕಳ್ಳತನದ ವಿರುದ್ಧ ಹೋರಾಟ ನಡೆಸಲು
ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ಈ ನಿಟ್ಟಿನಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರೊಂದಿಗೆ ಪ್ರತಿಭಟನೆ ನಡೆಯುವ ಫ್ರೀಡಂ ಪಾರ್ಕ್‌ಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು ಎಂದು ಡಿಸಿಎಂ ಮಾಹಿತಿ ನೀಡಿದ್ದಾರೆ.

