ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾವೇರಿ ನದಿ ರಕ್ಷಣಾ ಸಮಿತಿ ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾವೇರಿ ನದಿ ನೀರಿನ ಹಂಚಿಕೆ ಕುರಿತ ಕಾರ್ಯಗಾರ, ವಿಚಾರ ಸಂಕಿರಣದಲ್ಲಿ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಕಾವೇರಿ ನದಿ ರಕ್ಷಣಾ ಸಮಿತಿ ವತಿಯಿಂದ ‘ನ್ಯಾಯಯುತ ನೀರಿನ ಹಕ್ಕಿಗಾಗಿ’ ಎನ್ನುವ ಶೀರ್ಷಿಕೆಯಡಿ ಕುವೆಂಪು ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರ ಹಾಗೂ ವಿಚಾರಸಂಕಿರಣ ನಡೆಯಿತು.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮಿ, ಶ್ರೀ ಸೌಮ್ಯನಾಥ ನಾಥ ಸ್ವಾಮೀಜಿ, ಶ್ರೀ ಸಿದ್ಧರಾಮೇಶ್ವರ ಸ್ವಾಮೀಜಿ, ಶ್ರೀ ನಿಶ್ಚಲಾನಂದನಂದ ನಾಥ ಸ್ವಾಮೀಜಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಪ್ರತಿಪಕ್ಷ ನಾಯಕ ಆರ್. ಅಶೋಕ್, ಸುಪ್ರೀಂ ಕೋರ್ಟ್ ವಿಶ್ರಾಂತ ನ್ಯಾಯಮೂರ್ತಿ ವಿ. ಗೋಪಾಲಗೌಡ, ಸಂಸದರಾದ ಡಾ. ಸಿ.ಎನ್ ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎ. ತಿಪ್ಪೇಸ್ವಾಮಿ,
ಮಾಜಿ ಐಎಎಸ್ ಅಧಿಕಾರಿ ಟಿ. ತಿಮ್ಮೇಗೌಡ, ಕಾವೇರಿ ನದಿ ರಕ್ಷಣಾ ಸಮಿತಿ ಅಧ್ಯಕ್ಷ ಹೆಚ್.ಕೆ.ರಾಮು, ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್. ಆಂಜನೇಯ ರೆಡ್ಡಿ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.