ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಚನ ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ #GenZ ಹೋರಾಟ ಶುರುವಾಗಿದೆ ಎಂದು ಜೆಡಿಎಸ್ ತಿಳಿಸಿದೆ.
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರದ ದುರಾಡಳಿತಕ್ಕೆ ಬೇಸತ್ತು ಯುವ ಸಮುದಾಯ ತಿರುಗಿಬಿದ್ದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, 6 ತಿಂಗಳಲ್ಲೇ ನೇಮಕಾತಿ ಪ್ರಕಿಯೆಗಳನ್ನು ಶುರು ಮಾಡುತ್ತೇವೆ, ಯುವಜನತೆಗೆ ವರ್ಷಕ್ಕೆ 2.5 ಲಕ್ಷ ಉದ್ಯೋಗ ನೀಡುತ್ತೇವೆ ಎಂದು ಸುಳ್ಳು ಭರವಸೆ ಕೊಟ್ಟು ಯಾಮಾರಿಸಿ 2.5 ವರ್ಷ ಕಳೆದಿದೆ.
ಕುರ್ಚಿ ಉಳಿಸಿಕೊಳ್ಳುವುದರಲ್ಲಿ ಮಗ್ನರಾಗಿರುವ ಸಿದ್ದರಾಮಯ್ಯನವರೇ, ಇನ್ನಾದರೂ ಸರ್ಕಾರದ ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಾರಂಭಿಸಿ, ಉದ್ಯೋಗಕಾಂಕ್ಷಿಗಳಿಗೆ ನ್ಯಾಯ ಒದಗಿಸಿ ಎಂದು ಜೆಡಿಎಸ್ ತಾಕೀತು ಮಾಡಿದೆ.

