ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಸಂಸದ – ಶಾಸಕರ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿದೆ ಎಂದು ಕಾಂಗ್ರೆಸ್ ತಿಳಿಸಿದೆ.
ಲೋಕಸಭಾ ಅಧಿವೇಶನದಲ್ಲಿ ಅಮಿತ್ ಶಾ ಅವರು ಅಂಬೇಡ್ಕರ್ – ಅಂಬೇಡ್ಕರ್ ಎನ್ನುವುದು ಈಗ ಫ್ಯಾಷನ್ ಆಗಿದೆ. ಅದರ ಬದಲು ಅಷ್ಟೇ ಬಾರಿ ದೇವರ ಹೆಸರು ಹೇಳಿದ್ದರೆ ಅವರೆಲ್ಲರೂ ಸ್ವರ್ಗಕ್ಕಾದರೂ ಹೋಗುತ್ತಿದ್ದರು ಎಂದು ಬಾಬಾ ಸಾಹೇಬರನ್ನು ಟೀಕಿಸಿ ತಮ್ಮೊಳಗಿರುವ ಮನುವಾದಿ ಮನಸ್ಥಿತಿಯನ್ನು ಹೊರಹಾಕಿದ್ದರು ಎಂದು ಕಾಂಗ್ರೆಸ್ ಕಿಡಿಕಾರಿದೆ.
ಉಪ್ಪು ತಿಂದ ಮೇಲೆ ನೀರು ಕುಡಿಯಲೇ ಬೇಕು ಎಂಬಂತೆ, ಶೋಷಿತರ ಶಾಶ್ವತ ಧ್ವನಿ, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರರನ್ನು ಅಪಮಾನಿಸಿದ್ದಕ್ಕೆ ಸಂವಿಧಾನ ವಿರೋಧಿ ಗೃಹ ಸಚಿವರು ಶಿಕ್ಷೆ ಅನುಭವಿಸಲೇ ಬೇಕು ಎಂದು ಕಾಂಗ್ರೆಸ್ ಆಗ್ರಹ ಮಾಡಿದೆ.