ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ಮೊಕದ್ದಮೆ ದಾಖಲಿಸಿ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಕ್ರೋ ಫೈನಾನ್ಸ್‌‌ಗಳ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ನೀಡಿದ ಪ್ರಮುಖ ಸೂಚನೆಗಳು ನೀಡಿದ್ದಾರೆ.

ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಪ್ರತಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು.

ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ಮೊಕದ್ದಮೆ ದಾಖಲಿಸಬೇಕು.

ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು.

ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ. 

ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.

ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ  ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

Share This Article
error: Content is protected !!
";