ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲೂಕಿನ ಆರೂಡಿ ವಲಯದ ಕಾಡತಿಪ್ಪೂರು ಕಾರ್ಯಕ್ಷೇತ್ರದ ಹಾಲಪ್ಪನಹಳ್ಳಿ ಗ್ರಾಮದ ಹೊಳೆ ಮುತ್ತುರಾಯಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದ
ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ್ದು, ಐವತ್ತು ಸಾವಿರದ ಡಿಡಿ ಯನ್ನು ಕ್ಷೇತ್ರದ ಪರವಾಗಿ ತಾಲೂಕಿನ ಯೋಜನಾಧಿಕಾರಿಗಳಾದ ಸುಧಾ ಬಾಸ್ಕರ್ ದೇವಸ್ಥಾನ ಸಮಿತಿಗೆ ಹಸ್ತಾಂತರ ಮಾಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಕಮಿಟಿಯವರು ವಲಯದ ಮೇಲ್ವಿಚಾರಕರಾದ ಸುಪ್ರೀತ್ ಕುಮಾರ್ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್ ಹಾಗೂ ಸೇವಾ ಪ್ರತಿನಿಧಿ ರಾಧಮ್ಮ, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.