RCB ವಿರುದ್ಧ ಎಫ್ಐಆರ್ ದಾಖಿಲಿಸಿದ ಪೊಲೀಸರು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಪಿಎಲ್
ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ ಗುರುವಾರ RCB, KSCA ಹಾಗೂ ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವಿರುದ್ಧ ಪೊಲೀಸರು ಎಫ್ಐಆರ್  ದಾಖಲು ಮಾಡಿದ್ದಾರೆ.

- Advertisement - 

ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(ಕೆಎಸ್ ಸಿಎ) ​,​ಈವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆ, ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್‌ ಮತ್ತು ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.

- Advertisement - 

ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ನೀಡಿದ ದೂರಿನ ಆಧಾರಿಸಿ ಪ್ರಕರಣ ದಾಖಲಾಗಿದೆ.

 ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧಾರಿಸಿದ್ದು, ಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸಿಐಡಿ ತನಿಖೆಗೆ ನೀಡುವುದಾಗಿ ತಿಳಿಸಿದೆ.

- Advertisement - 

ಪೊಲೀಸರ ಪ್ರಕಾರ, ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 123/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 105, 125(1)(2), 132, 121/1, 190 ಮತ್ತು 3(5) ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಕಾಲ್ತುಳಿತದ ಸಾವಿನ ಕುರಿತು ಸರ್ಕಾರವು ಮ್ಯಾಜಿಸ್ಟೀರಿಯಲ್ ತನಿಖೆಯನ್ನು ಸಹ ಘೋಷಿಸಿದೆ. ಯಾವುದೇ ಲೋಪಗಳು ಸೇರಿದಂತೆ ಕಾಲ್ತುಳಿತದ ಕಾರಣಗಳನ್ನು ಪರಿಶೀಲಿಸಲು ಮತ್ತು ಹೊಣೆಗಾರಿಕೆಯನ್ನು ಸರಿಪಡಿಸಲು ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಮ್ಯಾಜಿಸ್ಟ್ರೇಟ್ 15 ದಿನಗಳಲ್ಲಿ ವಿಚಾರಣೆ ನಡೆಸಿ, ವರದಿ ಸಲ್ಲಿಸುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ​​ಆರ್‌ಸಿಬಿ ಆಟಗಾರರನ್ನು ಗೌರವಿಸಲು ವಿಶೇಷ ಸನ್ಮಾನ ಸಮಾರಂಭ ಆಯೋಜಿಸಿದ್ದ ಸಂದರ್ಭದಲ್ಲಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಜನ ಸಾವನ್ನಪ್ಪಿದ್ದಾರೆ ಮತ್ತು 56 ಜನ ಗಾಯಗೊಂಡಿದ್ದನ್ನು ಸ್ಮರಿಸಬಹುದಾಗಿದೆ.

 

Share This Article
error: Content is protected !!
";