ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೊಡಗಿನ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಿಜೆಪಿಯವರು ಹತಾಶರಾಗಿದ್ದು, ಬಾಯಿಗೆ ಬಂದಂತೆ ಹೇಳಿಕೆ ನೀಡಿದ್ದಾರೆ. ಸಾವಿನಲ್ಲೂ ರಾಜಕೀಯ ಮಾಡುವುದು ಬಿಜೆಪಿಗೆ ಅಭ್ಯಾಸ. ಬಿಜೆಪಿ ಹೇಳಿದ್ದಕ್ಕೆಲ್ಲಾ ನಾನು ಪ್ರತಿಕ್ರಿಯೆ ನೀಡಲಾಗಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.