ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರಿಕೆಟಿಗ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್ ವ್ಯವಸ್ಥಾಪಕ ಹಾಗೂ ಸಿಬ್ಬಂದಿಯ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗಿದೆ.
ಹೋಟೆಲ್ ಗೆ ಆಗಮಿಸುವಂತ ಗ್ರಾಹಕರಿಗೆ ಧೂಮಪಾನ ಮಾಡಲು ರೆಸ್ಟೋರೆಂಟ್‌ನಲ್ಲಿ ಪ್ರತ್ಯೇಕ ಸ್ಥಳ ಮೀಸಲಿರಿಸದ ಆರೋಪದ ಮೇಲೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಕಳೆದ ಮೇ 29ರಂದು ರೆಸ್ಟೋರೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದ್ದರು. ನಿಗದಿತ ಸಮಯ ಮೀರಿ ಗ್ರಾಹಕರಿಗೆ ಸೇವೆ ನೀಡುತ್ತಿದ್ದ ಆರೋಪದಡಿ ಕಳೆದ ವರ್ಷ ಜುಲೈನಲ್ಲಿ ಒನ್ 8 ಕಮ್ಯೂನ್ ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು. ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಒನ್ 8 ಕಮ್ಯೂನ್ ರೆಸ್ಟೋರೆಂಟ್, ಕೋಲ್ಕತ್ತಾ, ಮುಂಬೈ, ದೆಹಲಿ ಮತ್ತು ಪುಣೆಯಲ್ಲಿ ತನ್ನ ಶಾಖೆಗಳನ್ನು ಹೊಂದಿದೆ. 2023ರಲ್ಲಿ ಒನ್ 8 ಕಮ್ಯೂನ್‌ನ ಬೆಂಗಳೂರು ಶಾಖೆ ಆರಂಭ ಮಾಡಲಾಗಿದೆ.