ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಳ್ಳುಪುರ ರಸ್ತೆಯಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯ ತುಂಬಿದ್ದ ಕಾಟನ್ ಬಾಕ್ಸ್ ಗೋಡನ್ ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಭಸ್ಮವಾಗಿರುವ ಘಟನೆ ನೆಡೆದಿದೆ.
ಬೆಂಕಿಯ ಕೆನ್ನಾಲಿಗೆಗೆ ಕಾಟನ್ ಬಾಕ್ಸ್ ಗೋಡನ್ ನಲ್ಲಿದ್ದ ವಸ್ತುಗಳು ಸಂಪೂರ್ಣ ಸುಟ್ಟು ಬೂದಿಯಾಗಿವೆ. ಇದರಿಂದ ಗೋಡನ್ ಮಾಲೀಕರಿಗೆ ತುಂಬಾ ನಷ್ಟ ಉಂಟಾಗಿ ಸಂಕಷ್ಟದಲ್ಲಿದ್ದಾರೆ.
ಮಾಹಿತಿ ತಿಳಿದ ದೊಡ್ಡಬಳ್ಳಾಪುರದ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ದೊಡ್ಡಬಳ್ಳಾಪುರ ನಗರ ವ್ಯಾಪ್ತಿಯಲ್ಲಿ ಘಟನೆ ನೆಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.