ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಬಾಶಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಬ್ಯಾಂಕ್ ಸರ್ಕಲ್ ನಲ್ಲಿರುವ ಎಸ್ ಎಲ್ ವಿ ಬೇಕರಿಯಲ್ಲಿ ಶಾಟ್ ಸರ್ಕ್ಯೂಟ್ ಉಂಟಾದ ಪರಿಣಾಮ ಬೆಂಕಿಯಿಂದ ದಿನ ನಿತ್ಯ ಬಳಕೆ ಮಾಡುವಂತಹ ವಸ್ತುಗಳು ಸುಟ್ಟ ಹೋಗಿರುವ ಘಟನೆ ನಡೆದಿದೆ.ಬೇಕರಿಯಲ್ಲಿನ ಕೂಲರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ.
ಕೊಡಲೆ ಎಚ್ಚೆತ್ತ ಕಾರ್ಮಿಕರು ಬೆಂಕಿ ನಂದಿಸಲು ಮುಂದಾದರು ಸಾದ್ಯವಾಗದ ಕಾರಣ ಅಗ್ನಿ ಶಾಮಕ ಕರೆ ಮಾಡಲಾಗಿದ್ದು ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ದಾವಿಸಿ ಕೂಡಲೆ ಬೆಂಕಿಯನ್ನು ನಂದಿಸಿದ್ದಾರೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವಾದರು, ಸುಮಾರು 2 ಲಕ್ಷ ರೂ. ಮೌಲ್ಯದ ಬೇಕರಿ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.