ಮಾಜಿ ವಿಪ ಸದಸ್ಯ ವೈಎಎನ್ ಸಂಬಂಧಿಯಿಂದ ಗುಂಡಿನ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಶಾಂತ ರೀತಿಯಿಂದ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿಯೊಬ್ಬ ಗುಂಡಿನ(ಫೈರಿಂಗ್) ದಾಳಿ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ನಡೆದಿದೆ.

ಚಿಕನ್ ರವಿ ಎಂಬುವರಿಗೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲ್ಲು ಕ್ವಾರಿ ಕ್ರಷರ್​ಗೆ ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದರು ಎನ್ನಲಾಗಿದೆ.

ರಸ್ತೆ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮಾಜಿ ಎಂಎಲ್​ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿ ಸಕಲೇಶ ಕುಮಾರ್ ಸಿನಿಮೀಯ ರೀತಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಸಕಲೇಶಕುಮಾರ್ ಮೂರು ಸುತ್ತು ಗುಂಡು ಹಾರಿಸಿದ್ದು, ಒಂದು ಗುಂಡು ರವಿ ಅವರ ದೇಹದ ಒಳಗೆ ಹೊಕ್ಕಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಯಲ್ಲಿ ರವಿ ಅವರನ್ನು ದಾಖಲಿಸಲಾಗಿದೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಕುಶಲ್ ಹಾಗೂ ದೀಪ್ತಿ ಎನ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಸಕಲೇಶಕುಮಾರ್​ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು  ಬಂಧಿಸಿದ್ದಾರೆ. ಸಕಲೇಶ ಕುಮಾರ್ ವಿರುದ್ದ ಕ್ರಮಕ್ಕೆ ಆಗ್ರಹಿಸಿ ಮಂಚೇನಹಳ್ಳಿ ಪೊಲೀಸ್ ಠಾಣೆ ಮುಂದೆ ಸ್ಥಳಿಯರು ಪ್ರತಿಭಟನೆ ನಡೆಸಿ ಒತ್ತಾಯಿಸಿದರು.

 

 

 

Share This Article
error: Content is protected !!
";