ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ಇಂಡಿಪೆಂಡೆನ್ಸ್ ಕಪ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ದೇವರಾಜ್ ಅರಸ್ ವಿದ್ಯಾಸಂಸ್ಥೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ಕೀರ್ತಿ ತಂದಿದ್ದಾರೆ.
ಇಂಡಿಯನ್ ಇಂಟರ್ ನ್ಯಾಷನಲ್ ಶಾಲೆಗೆ ಕೀರ್ತಿ ತಂದ ಮಕ್ಕಳನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸಿ.ರಘುಚಂದನ್, ಶಾಲಾ ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

