ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಪದವಿ ಪೂರ್ವ ಕಾಲೇಜುಗಳಿಗೆ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಸೇವಾಸಿಂಧು ತಂತ್ರಾಂಶದಲ್ಲಿ ಕಳೆದ ಮೇ 03 ರಿಂದ 22 ರವರೆಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರಥಮ ಸುತ್ತಿನ ಆಯ್ಕೆಪಟ್ಟಿಯನ್ನು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ಜಾಲತಾಣ https://dom.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಪಟ್ಟಿಯಲ್ಲಿರುವ ವಿದ್ಯಾರ್ಥಿಗಳು ಪ್ರವೇಶಕ್ಕೆ ಸಂಬಂಧಿಸಿದ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜುಗಳಿಗೆ ಇದೇ ಮೇ31ರ ಸಂಜೆ 5 ಗಂಟೆಯೊಳಗೆ ಪ್ರವೇಶ ಪಡೆಯಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಕಾಲೇಜು ಪ್ರಾಂಶುಪಾಲರು, ಜಿಲ್ಲಾ ಕಚೇರಿ ಹಾಗೂ ಅಲ್ಪಸಂಖ್ಯಾತರ ಜಿಲ್ಲಾ, ತಾಲ್ಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.