ಪ್ರಥಮ ಪಿ.ಯು.ಸಿ ದಾಖಲಾತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಶಿವಮೊಗ್ಗ:
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ಭದ್ರಾವತಿ ತಾಲ್ಲೂಕಿನ ಆನವೇರಿಯ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪಿ.ಸಿ.ಎಂ.ಬಿ ಮತ್ತು ಪಿ.ಸಿ.ಎಂ.ಸಿ ಕೋರ್ಸ್ಗಳಲ್ಲಿ ಲಭ್ಯವಿರುವ 80 ಸೀಟುಗಳಿಗೆ ಅರ್ಜಿ ಆಹ್ವಾನಿಸಿದೆ.

ಆಸಕ್ತ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ/ಹಿಂದುಳಿದ ವರ್ಗದ ವಿದ್ಯಾರ್ಥಿಗಳು 2 ಭಾವಚಿತ್ರ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಎಸ್.ಟಿ.ಎಸ್. ನಂಬರ್, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ ಹಾಗೂ ಪೋಷಕರ ಅಥವಾ

- Advertisement - 

ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಿ ಸೆ. 12 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿ ಶೋಭಾ ಕೆ.ಆರ್. ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ.9535636963 ಗೆ ಸಂಪರ್ಕಿಸುವುದು.

 

- Advertisement - 

 

 

Share This Article
error: Content is protected !!
";