ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಬಚ್ಚಬೋರನಹಟ್ಟಿ ಗ್ರಾಮದ ವಿದ್ಯಾರ್ಥಿನಿ ಪಿ.ಓ.ಶುಭ ಅವರು ಎಂ.ಎ.ಸಮಾಜಶಾಸ್ತ್ರದಲ್ಲಿ ಪ್ರಥಮ ರ್ಯಾಂಕ್ ಹಾಗೂ ಚಿನ್ನದ ಪದಕ ಪಡೆದಿದ್ದಾರೆ.
ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿಯ ಸ್ನಾತಕೋತ್ತರ ಸಮಾಜಶಾಸ್ತ್ರ ಅಧ್ಯಯನ ವಿಭಾಗದಲ್ಲಿ ವ್ಯಾಸಂಗ ಮಾಡಿದ್ದ ಅವರು, ವಿಭಾಗಕ್ಕೆ ಪ್ರಥಮ ಸ್ಥಾನ ಪಡೆದು, ವಿಶ್ವವಿದ್ಯಾಲಯದ ಗೌರವಕ್ಕೆ ಪಾತ್ರರಾಗಿದ್ದಾರೆ.
ಈಚೆಗೆ ನಡೆದ ದಾವಣಗೆರೆ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರಿಂದ ಚಿನ್ನದ ಪದಕ, ರ್ಯಾಂಕ್ ಪ್ರಮಾಣ ಪತ್ರ ಹಾಗೂ ಪದವಿ ಪ್ರಮಾಣ ಪತ್ರ ಸ್ವೀಕರಿಸಿದರು.

