ಎಸ್ ಜೆಸಿಆರ್  ಶಾಲೆಯ ರಂಜಿತಾ ರಾಜ್ಯಕ್ಕೆ ಪ್ರಥಮ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
2025 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 74.02 ರಷ್ಟು ಫಲಿತಾಂಶ ಬಂದಿದೆ.  ಜಿಲ್ಲೆ 9 ನೇ ಸ್ಥಾನದಲ್ಲಿದೆ ಆದರೆ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳು 625 ಅಂಕಗಳಿಗೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ದೊಡ್ಡಬಳ್ಳಾಪುರ ತೂಬಗೆರೆ ಹೋಬಳಿಯ  ಮೇಳೆಕೋಟೆ ಕ್ರಾಸ್ ನಲ್ಲಿರುವ ಎಸ್.ಜೆ.ಸಿ.ಆರ್ ಶಾಲೆಯ ರಂಜಿತಾ ಎ.ಸಿ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ ಹಾಗು ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಟೌನ್ ನ ನೀಲಗಿರೇಶ್ವರ ಪ್ರೌಢಶಾಲೆಯ ಸಿ. ಭಾವನ ಎಂಬ ವಿದ್ಯಾರ್ಥಿ ಎಸ್.ಎಸ್.ಎಲ್.ಸಿ ಯಲ್ಲಿ 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

Share This Article
error: Content is protected !!
";