ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭಾನುವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರಾಷ್ಟ್ರಧ್ವಜರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ವೆಂಕಟೇಶ್ ನಾಯ್ಕ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಮಧುಸೂದನ್ ಸೇರಿದಂತೆ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಇದ್ದರು.