ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಯಪುರ ಗ್ರಾಮದ ಅಲೆಮಾರಿ ಸಮುದಾಯದ ಎ.ಶ್ರೀನಿವಾಸ್ ರವರ 50 ವರ್ಷಗಳ ಸುದೀರ್ಘ ಹಗಲುವೇಷ ಜಾನಪದ ಕಲಾ ಸೇವೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ 2024ನೇ ಸಾಲಿನ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಿದೆ.
ಬೀದರ್ ಶ್ರೀ ಚನ್ನಬಸಪ್ಪ ಪಟ್ಟದೇವರ ರಂಗ ಮಂದಿರದಲ್ಲಿ ಮಾರ್ಚ್-15 ರಂದು ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಬಸವರಾಜು ಹೂಗಾರ್ ಜಿಲ್ಲಾಧಿಕಾರಿ ಶಿಲ್ಪಾ ಶರ್ಮ ಜಾನಪದ ಅಕಾಡೆಮಿ ಸದಸ್ಯರಾದ ಕಲಮರಳ್ಳಿ ಮಲ್ಲಿಕಾರ್ಜುನ್ ಪ್ರಶಸ್ತಿ ಪ್ರದಾನ ಮಾಡಿದರು.