ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆ – ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ / ಬೆಂಗಳೂರು:
ಅನರ್ಹರು ಬಿಪಿಎಲ್ ಕಾರ್ಡಗಳನ್ನು ಬಳಸುತ್ತಾರೆ ಎನ್ನುವ ದೂರನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಣೆಗೆ ಕ್ರಮ ವಹಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಹೇಳಿದರು.

ವಿಧಾನ ಪರಿಷತ್ ಕಲಾಪದ ವೇಳೆ ಸದಸ್ಯರಾದ ಕೆ.. ತಿಪ್ಪೀಸ್ವಾಮಿ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಹಾಗೂ ವಿರೋದ ಪಕ್ಷದ ಕೆಲ ಸದಸ್ಯರು ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ

ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ಯೊಂದರೆಯಾಗದ ಹಾಗೆ ಎಪಿಎಲ್ ಕಾರ್ಡಗೆ ಅರ್ಹ ಇರುವವರನ್ನು ಬಿಪಿಎಲ್ನನಿಂದ ಬೇರ್ಪಡಿಸಲಾಗುವುದು ಎಂದು ತಿಳಿಸಿದರು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್ ಗಳಲ್ಲಿ ಶೇಕಡಾ 20 ರಷ್ಟು ಎಪಿಎಲ್ ಕಾರ್ಡದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು ಇದನ್ನು ಅತಿ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಅರ್ಹ ಬಿಪಿಎಲ್ ಕಾರ್ಡಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡಗಳು ರದ್ದಾಗಿದ್ದರೆ ಅಂತವರಿಗೆ ಪುನಃ ಕಾರ್ಡು ದೊರಕಿಸಿಕೊಡಲಾಗುವುದು ಎಂದರು.
ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಿದಲ್ಲಿ ಕಾರ್ಡಗಳ ಪರಿಷ್ಕರಣೆ ಕಾರ್ಯವು ಸಫಲವಾಗಲಿದೆ ಎಂದು ಸಚಿವರು ಸದನದಲ್ಲಿ ಉತ್ತರಿಸಿದರು.

 

 

 

- Advertisement -  - Advertisement - 
Share This Article
error: Content is protected !!
";