ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ?

News Desk

ಚಂದ್ರವಳ್ಳಿ ನ್ಯೂಸ್, ಬೆಳಗಾವಿ:
ಬೆಳಗಾವಿಯಲ್ಲಿ ಯಾವ ಪುರುಷಾರ್ಥಕ್ಕೆ ಅಧಿವೇಶನ ಮಾಡುತ್ತೀರಿ? ನಾಯಕತ್ವ ಗೊಂದಲ ಬಗೆಹರಿಸಿಕೊಂಡು ಅಧಿವೇಶನ ನಡೆಸುವಂತೆ ಹೇಳಿದ್ದ ನಮ್ಮ‌ಮಾತನ್ನು ರಾಜ್ಯ ಸರ್ಕಾರ ಕೇಳಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಬೆಳಗಾವಿಯಲ್ಲೂ ಡಿನ್ನರ್ ಪಾರ್ಟಿ ಮುಂದುವರೆಸಿರುವುದು ನಾಡಿನ ಜನತೆ ಮತ್ತು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಬೆಳಗಾವಿ ಅಧಿವೇಶನ ಆರಂಭವಾಗುವ 10 ದಿನ ಮುಂಚೆ ನಿಮ್ಮ ನಾಯಕತ್ವದ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತಾ ನಾವು ಬಹಳ ಸ್ಪಷ್ಟವಾಗಿ ಹೇಳಿದ್ದೆವು.

- Advertisement - 

ಮುಖ್ಯಮಂತ್ರಿ ಕುರ್ಚಿಗಾಗಿ ನಡೆಯುತ್ತಿರುವ ಕಾಳಗ ಕೇವಲ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ ಅಲ್ಲ. ಅವರು ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಮಾತ್ರ ಅಲ್ಲ. ಇಡೀ ರಾಜ್ಯದ ಮುಖ್ಯಮಂತ್ರಿಗಳು. ಇಷ್ಟೊಂದು ಗೊಂದಲ ಇಟ್ಟುಕೊಂಡು ಕಾಟಾಚಾರಕ್ಕೆ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸುವುದು ಬೇಡ. ಅಧಿವೇಶನ‌ಮುಂದೂಡಿ ಅಂತಾ ನಾವು ಹೇಳಿದ್ದೆವು ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಬ್ರೇಕ್ ಪಾಸ್ಟ್, ಲಂಚ್ ಮತ್ತು ಡಿನ್ನರ್ ಮೀಟಿಂಗ್ ಭರಾಟೆಯಲ್ಲಿ ರಾಜ್ಯದ ಆಡಳಿತ ಸರ್ಕಾರ ಸಂಪೂರ್ಣವಾಗಿ ಮರೆತಿದೆ. ಕಳೆದ ನಾಲ್ಕು ತಿಂಗಳಿನಿಂದ ಪದೇ ಪದೆ ಡಿನ್ನರ್ ಮೀಟಿಂಗ್ ಮಾಡಿಕೊಂಡು ಬಂದಿದ್ದಾರೆ. ಇದರ ಕಾರಣದಿಂದಲೇ ಕಬ್ಬು ಬೆಳೆಗಾರರ ಹೋರಾಟ ವಿಕೋಪಕ್ಕೆ ಹೋಯಿತು‌ಎಂದು ವಿಜಯೇಂದ್ರ ದೂರಿದರು.

- Advertisement - 

ಡಿನ್ನರ್, ಲಂಚ್ ಮೀಟಿಂಗ್ ನಲ್ಲಿ ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡುತ್ತಾರೆ. ಅಂದರೆ ಅದೂ ಇಲ್ಲ. ಕೇವಲ ತಮ್ಮ ಕುರ್ಚಿ ಉಳಿಸಿಕೊಳ್ಳಲು ಕೆಲವರು ಮೀಟಿಂಗ್ ಮಾಡುತ್ತಿದ್ದಾರೆ. ಡಿ. ಕೆ. ಶಿವಕುಮಾರ್ ನೇತೃತ್ವದ ತಂಡವು ಹೇಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು‌ಕುರ್ಚಿಯಿಂದ ಬೀಳಿಸಬೇಕು ಅಂತಾ ತಂತ್ರಗಾರಿಕೆ ರೂಪಿಸಲು ಮೀಟಿಂಗ್ ಮಾಡುತ್ತಿದೆ. ಇದರ ನಡುವೆ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದು ಹೋಗಿದೆ. ರೈತರು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದರು.

 

 

Share This Article
error: Content is protected !!
";