ಡಿಸಿಎಂ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ಉಪ ಸಂಪುಟ ಸಮಿತಿ ರಚನೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋವಿಡ್ – 19 ಸಾಂಕ್ರಾಮಿಕ ರೋಗ ನಿರ್ವಹಣೆಯ ವೇಳೆ ನಡೆದಿರಬಹುದಾದ ಅವ್ಯವಹಾರಗಳ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಡಿ ಕುನ್ನಾ ಅವರ ನೇತೃತ್ವದ ವಿಚಾರಣಾ ಆಯೋಗವು ತನ್ನ ಮೊದಲ ವರದಿ ನೀಡಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿ ತಿಳಿಸಿದ್ದಾರೆ.

 ಸದರಿ ವರದಿಯಲ್ಲಿ ಬೃಹತ್ ಪ್ರಮಾಣದ ಹಗರಣ ನಡೆದಿರುವುದಾಗಿ ಉಲ್ಲೇಖಿಸಿದ್ದು, ಈ ಕುರಿತು ಕ್ರಮ ಕೈಗೊಳ್ಳಬಹುದೆಂದು ತಿಳಿಸಲಾಗಿದೆ.

ಈ ನಿಟ್ಟಿನಲ್ಲಿ ಪರಿಶೀಲಿಸಿ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪಸಮಿತಿ ರಚಿಸಿ, ಆದೇಶಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

 

 

- Advertisement -  - Advertisement -  - Advertisement - 
Share This Article
error: Content is protected !!
";