ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನ, ಮಾಜಿ ಸಿಎಂ ವಿಜಯ್ ರೂಪಾನಿ ಸಾವು

News Desk

ಚಂದ್ರವಳ್ಳಿ ನ್ಯೂಸ್, ಅಹಮದಾಬಾದ್:
ಗುಜರಾತ್‌ನ ಅಹ್ಮದಾಬಾದ್ ನಗರದಲ್ಲಿ ಸುಮಾರು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಅಪಘಾತಕ್ಕೀಡಾಗಿದೆ.
ವಿಮಾನ ಟೇಕ್ ಆಫ್ ಆದ ಕೂಡಲೆ ಏರ್ ಇಂಡಿಯಾ ವಿಮಾನ ಪತನವಾಗಿರುವ ದುರಂತ ಘಟನೆ ಜೂನ್‌ 12 ರಂದು ಗುರುವಾರ ನಡೆದಿದೆ.

- Advertisement - 

ಗುಜರಾತ್‌ನ ಅಹಮದಾಬಾದ್‌ನ ಮೇಘನಿ ನಗರ ಪ್ರದೇಶದಲ್ಲಿ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ ಪತನವಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸಿದೆ.

- Advertisement - 

ಗುಜರಾತ್‌ನ ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟ ಏರ್ ಇಂಡಿಯಾ ವಿಮಾನವು ಕೆಲವೇ ನಿಮಿಷಗಳಲ್ಲಿ ಪತನಗೊಂಡಿದೆ.

ಪತನವಾಗಿರುವ ವಿಮಾನದಲ್ಲಿ ಲಂಡನ್‌ಗೆ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.
ಅಪಘಾತದ ದೃಶ್ಯಗಳು ವಿಮಾನ ನಿಲ್ದಾಣದಲ್ಲಿ ದಟ್ಟವಾದ ಹೊಗೆ ಕಾಣುತ್ತಿದ್ದು ಆ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.
ಈ ದುರ್ಘಟನೆಯಿಂದ ಹಲವಾರು ಸಾವುನೋವುಗಳ ಭೀತಿ ಎದುರಾಗಿದೆ.

- Advertisement - 

242 ಪ್ರಯಾಣಿಕರಲ್ಲಿ ಎಷ್ಟು ಜನ ಸಾವನ್ನಪ್ಪಿದ್ದಾರೆ ಎಂಬುದರ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಅಹಮದಾಬಾದ್​ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಿಂದ ದಟ್ಟ ಹೊಗೆಯ ಮೋಡ ಆವರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿದೆ.

ವಿಮಾನದೊಳಗಿದ್ದ ಸಿಬ್ಬಂದಿ ಮತ್ತು ಪ್ರಯಾಣಿಕರನ್ನು ರಕ್ಷಣಾ ಮತ್ತು ಸ್ಥಳಾಂತರಿಸುವ ಕಾರ್ಯಾಚರಣೆಗಳು ನಡೆಯುತ್ತಿವೆ.
ಪತನವಾಗಿರುವ ವಿಮಾನವು ಅಹಮದಾಬಾದ್​ ವಿಮಾನ ನಿಲ್ದಾಣದ ಹತ್ತಿರದ ವಸತಿ ಪ್ರದೇಶದಲ್ಲಿ ಪತ್ತೆಯಾಗಿದೆ. ವಿಮಾನದಲ್ಲಿ 242 ಪ್ರಯಾಣಿಕರಿದ್ದು ಅದು ಬೋಯಿಂಗ್ 787 ಡ್ರೀಮ್‌ಲೈನರ್ ವಿಮಾನವಾಗಿತ್ತು.

ಈ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿದಂತೆ 50 ಕ್ಕೂ ಹೆಚ್ಚು ಬ್ರಿಟಿಷ್‌ ಪ್ರಜೆಗಳಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ರಕ್ಷಣಾ ಕಾರ್ಯಚಾರಣೆ ನಡೆಯುತ್ತಿತ್ತು. ಸಾವು-ನೋವುಗಳ ಬಗ್ಗೆ ಯಾವುದೇ ಅಧಿಕೃತ ವರದಿಗಳು ಬಿಡುಗಡೆಯಾಗಿಲ್ಲ.

Share This Article
error: Content is protected !!
";