ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ತಾಲೂಕಿನ ಕಣಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಣಜನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶುಕ್ರವಾರ ನಡೆದ ಪ್ರಧಾನಿ ಜವಾಹರ್ ಲಾಲ್ ನೆಹರು ಜನ್ಮದಿನಾಚರಣೆ ಹಾಗೂ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಮಾರುತಿ ಮೆಡಿಕಲ್ ಧರ್ಮಪುರ ರವರ ಕಡೆಯಿಂದ 600 ನೋಟ್ ಪುಸ್ತಕಗಳನ್ನು ಉಚಿತವಾಗಿ ಮಕ್ಕಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಕಣಜನಹಳ್ಳಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರದೀಪ್, ಸುರೇಶ್, ಶಾಲೆಯ ಮುಖ್ಯ ಶಿಕ್ಷಕ ಗಣೇಶ, ಸಹ ಶಿಕ್ಷಕರು ಹಾಗೂ ಎಸ್ ಟಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು, ಪೋಷಕರು ಸಮಸ್ತ ಊರಿನ ಗ್ರಾಮಸ್ಥರು ಬಾಗವಹಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

