ಇಂದು ಅಜ್ಜಪ್ಪನಹಳ್ಳಿ ವಿದ್ಯುತ್ ಉಪಕೇಂದ್ರದ ಶಂಕು ಸ್ಥಾಪನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇದೇ .27 ರಂದು ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ತಾಲ್ಲೂಕು ಅಜ್ಜಪ್ಪನಹಳ್ಳಿ ವಿದ್ಯುತ್ ಉಪಕೇಂದ್ರದ ಆವರಣದಲ್ಲಿ ನೂತನ 220/66/11ಕೆವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು. ಇಂದನ ಸಚಿವ ಕೆ.ಜೆ.ಜಾರ್ಜ್ ಘನ ಉಪಸ್ಥಿತಿ ವಹಿಸುವರು.

ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕ ಹಾಗೂ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ,

ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಇಂಧನ ಇಲಾಖೆ ಸರ್ಕಾರದ ಅಪರ ಕಾರ್ಯದರ್ಶಿ ಗೌರವ್ ಗುಪ್ತಾ, ಪ್ರಾದೇಶಿಕ ಆಯಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಓ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರ ರಂಜಿತ್ ಕುಮಾರ್ ಬಂಡಾರು,

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕ ಮಂಜುನಾಥ್.ಎಸ್.ವಿ, ಯಳಗೋಡು ಗ್ರಾಮ ಪಂಚಾಯತಿ ಅಧ್ಯಕ್ಷೆ ಅನಿತಾ ನಾಗರಾಜ್, ಉಪಾಧ್ಯಕ್ಷೆ ನಿರ್ಮಲಮ್ಮ ತಿಪ್ಪೇಸ್ವಾಮಿ .ಕೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಾರ್ಯಾಚರಣೆ ಮುಖ್ಯ ಇಂಜಿನಿಯರ್ ಸತ್ಯನಾರಾಯಣ ಬಿ.ಎನ್. ಅಧೀಕ್ಷಕ ಇಂಜಿನಿಯರ್ ರೇವಣಸಿದ್ದಪ್ಪ.ಜಿ.ಎಂ. ಕಾರ್ಯನಿರ್ವಾಹಕ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

 

Share This Article
error: Content is protected !!
";