ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಫಾಕ್ಸ್ ಕಾನ್ ಸಂಸ್ಥೆಯ ಭಾರತದ ಮುಖ್ಯಸ್ಥ ರಾಬರ್ಟ್ ವೊ ಅವರೊಂದಿಗೆ ಭಾನುವಾರ ಮಾತುಕತೆ ನಡೆಸಲಾಯಿತು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ತಿಳಿಸಿದರು.
ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ್, ಕೆ.ಹೆಚ್.ಮುನಿಯಪ್ಪ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

