ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಸಹಯೋಗದಲ್ಲಿ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಇದೇ ಡಿ.18ರಂದು ಬೆಳಿಗ್ಗೆ 10.30 ರಿಂದ 3.30 ರವರೆಗೆ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು, ನ್ಯಾಯಾಂಗ ಇಲಾಖೆ ಸಿಬ್ಬಂದಿಗೆ ಉಚಿತ ಆಯುಷ್ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ಮಾಡಿ, ಔಷಧಿಗಳನ್ನು ವಿತರಿಸಲಾಗುವುದು. ಆಯುಷ್ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು, ಮಹಿಳಾ ವೈದ್ಯರು ವಿವಿಧ ಖಾಯಿಲೆಗಳಿಗೆ ತಪಾಸಣೆ ಮಾಡಿ ಆಯುರ್ವೇದ ಪದ್ಧತಿಯಲ್ಲಿ ಚಿಕಿತ್ಸೆ ನೀಡಲಿದ್ದಾರೆ.
ಜಿಲ್ಲಾ ನ್ಯಾಯಾಧೀಶರಾದ ರೋಣ ವಾಸುದೇವ್ ಶಿಬಿರ ಉದ್ಘಾಟಿಸಲಿದ್ದು, ಈ ಶಿಬಿರದ ಪ್ರಯೋಜನವನ್ನು ಎಲ್ಲಾ ವಕೀಲರು, ಸಿಬ್ಬಂದಿಯವರು ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ. ಚಂದ್ರಕಾಂತ್ ನಾಗಸಮುದ್ರ ತಿಳಿಸಿದ್ದಾರೆ.