ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ವೃತ್ತಿ ಮತ್ತು ಬದುಕಿನ ಸಮಸ್ಯೆಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಜುಲೈ 1 ಕ್ಕೆ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದಾರೆ ಎಂದು ಕೆ.ವಿ ಪ್ರಭಾಕರ್ ತಿಳಿಸಿದರು.
ಹಾಗೆಯೇ 5 ಲಕ್ಷ ರೂಪಾಯಿ ವರೆಗಿನ ಆರೋಗ್ಯ ಚಿಕಿತ್ಸಾ ವೆಚ್ಚವನ್ನು ಒದಗಿಸುವ ಪತ್ರಕರ್ತರ ಆರೋಗ್ಯ ಕಾರ್ಡ್ ವ್ಯವಸ್ಥೆಯನ್ನೂ ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಆರೋಗ್ಯ ಸಂಜೀವಿನಿ ಕಾರ್ಡ್ ಕೂಡ ಜುಲೈ 1 ರಂದು ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪತ್ರಕರ್ತರ ಭವನ ಮತ್ತು ತಾಲ್ಲೂಕು ಪತ್ರಕರ್ತರ ಭವನದ ನಿರ್ಮಾಣಕ್ಕೂ ಸರ್ಕಾರದ ಜೊತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಭಾಕರ್ ಭರವಸೆ ನೀಡಿದರು.
ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪದಾಧಿಕಾರಿಗಳು ಹಾಜರಿದ್ದರು.

