ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಇಲ್ಲಿನ ಆರ್‌ಎಲ್‌ಜೆಐಟಿ ಕ್ಯಾಂಪಸ್‌ನಲ್ಲಿ ಕಾರ್ಯಾರಂಭ ಮಾಡಿರುವ ಆರ್.ಎಲ್.ಜಾಲಪ್ಪ ಅಕಾಡೆಮಿ(ರಿ.)ಯಲ್ಲಿ ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ತರಗತಿಗಳು ಮಾ.1ರಿಂದ ಆರಂಭವಾಗಲಿವೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪದವೀಧರ, ಬಡ ಹಾಗೂ ಗ್ರಾಮೀಣ ಯುವಕ-ಯುವತಿಯರಿಗೆ 4 ತಿಂಗಳ ಉಚಿತ ತರಬೇತಿ ನೀಡಲಾಗುತ್ತಿದೆ. ಹೊರ ಊರಿನ ವಿದ್ಯಾರ್ಥಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆಯೂ ಇರುತ್ತದೆ. ಆಸಕ್ತರು www.rljacadeny.in ವೆಬ್‌ಸೈಟ್‌ನಲ್ಲಿ ಇದೇ ಫೆ.25ರ ಒಳಗೆ ಅರ್ಜಿಗಳನ್ನು ಆನ್‌ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 99006 06042, 97314 80759 ಸಂಪರ್ಕಿಸಬಹುದು ಎಂದು ಅಕಾಡೆಮಿ ಕಾರ್ಯದರ್ಶಿ ಲಕ್ಷ್ಮಣ ಕೊಡಸೆ ತಿಳಿಸಿದ್ದಾರೆ.

