ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗು ದೊಡ್ಡಬಳ್ಳಾಪುರ ಆರಕ್ಷಕ ಇಲಾಖೆಯ ಸಹಕಾರದೂಂದಿಗೆ ದೃಷ್ಟಿ ಕಣ್ಣಿನ ಆಸ್ಪತ್ರೆ ಸಹಭಾಗಿತ್ವದಲ್ಲಿ ಆರಕ್ಷಕ ಠಾಣಾ ಸಿಬ್ಬಂದಿಗಳಿಗೆ ಉಚಿತ ಕಣ್ಣಿನ ತಪಾಸಣೆ ಹಾಗು ಉಚಿತ ಅರೋಗ್ಯ ಶಿಬಿರದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ಪರೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ರಾಜನಕುಂಟೆ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ದಿಲೀಪ್ ಕುಮಾರ್ ಉದ್ಘಾಟಿಸಿ ಮಾತನಾಡಿ ವರ್ಷದಲ್ಲಿ ಎರಡು ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರೆ ದೇಹದಲ್ಲಿನ ಸಮಸ್ಯೆ ಬಗ್ಗೆ ತಿಳಿದು ಅದಕ್ಕೆ ತಕ್ಕ ಔಷಧಿ ಪಡೆದು ಕೊಂಡರೆ ಸಮಸ್ಯೆ ಬಗೆಹರಿಸಿ ಕೊಳ್ಳಬಹುದು ಆದ್ದರಿಂದ ಪೊಲೀಸ್ ಇಲಾಖೆಯವರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಹೇಳಿದರು.
ನಂತರ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಉಮಾರಬ್ಬರವರು ಯೋಜನೆಯ ಕಾರ್ಯಕ್ರಮ ಹಾಗೂ ಆರೋಗ್ಯ ತಪಾಸಣೆ ಶಿಬಿರ ಉದ್ದೇಶದ ಬಗ್ಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ನಗರ ಠಾಣೆಯ ಪಿಎಸ್ಐ ಕೃಷ್ಣಮೂರ್ತಿ, ತಾಲೂಕು ಯೋಜನಾಧಿಕಾರಿ ದಿನೇಶ್, ಕಣ್ಣಿನ ಆಸ್ಪತ್ರೆ ನೇತ್ರಾಧಿಕಾರಿ ಡಾ.ನಾಯ್ಡು, ಸಿಬ್ಬಂದಿಗಳು , ದೊಡ್ಡಬಳ್ಳಾಪುರ ತಾಲೂಕಿನ 9 ಆರಕ್ಷಕ ಠಾಣೆಯ ಒಟ್ಟು 120 ಸಿಬ್ಬಂದಿಗಳು ಹಾಜರಾಗಿ ರಕ್ತ ಪರೀಕ್ಷೆ, ಬಿಪಿ ಪರೀಕ್ಷೆ ಹಾಗೂ ಕಣ್ಣಿನ ತಪಾಸಣೆ ಮಾಡಿಸಿಕೊಂಡರು.
ಈ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಸಿಬ್ಬಂದಿಗಳು, ಆಸ್ಪತ್ರೆ ಸಿಬ್ಬಂದಿಗಳು, ಆರಕ್ಷಕ ಠಾಣಾ ಸಿಬ್ಬಂದಿಗಳು ಉಪಸ್ಥಿತರಿದ್ದರು.