ಹಿರಿಯ ನಾಗರಿಕರಿಗೆ ಉಚಿತ ನೇತ್ರ ತಪಾಸಣಾ ಶಿಬಿರ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಹಿರಿಯ ನಾಗರಿಕರ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯದಲ್ಲಿ ಹಿರಿಯ ನಾಗರಿಕರ ಕಣ್ಣಿನ ಸ್ವಾಥ್ಯಕ್ಕಾಗಿ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ವಿಶೇಷ ಅಭಿಯಾನ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. 60 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟ ಬಿ.ಪಿ.ಎಲ್. ಪಡಿತರ ಚೀಟಿ ಹೊಂದಿರುವ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತçಚಿಕಿತ್ಸೆ ನಡೆಸಲಾಗುವುದು. ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಲಾಗಿದೆ.

.3 ರಂದು ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30ರವರೆಗೆ ಚಿತ್ರದುರ್ಗ ನಗರದ ಸ್ಟೇಡಿಯಂ ಹತ್ತಿರದ ಬಾಲಭವನ ಆವರಣದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿ, .4 ರಂದು ಮೊಳಕಾಲ್ಮೂರು ಪಟ್ಟಣದ ಸರ್ಕಾರಿ ಕ್ಷೇತ್ರ ಮಾದರಿ ಬಾಲಕರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ,

.6 ರಂದು ಚಳ್ಳಕೆರೆ ನಗರದ ತಾಲ್ಲೂಕು ಪಂಚಾಯಿತಿ ಎದುರಿನ ಸರ್ಕಾರಿ ನೌಕರರ ಸಂಘ ಸಭಾಂಗಣದಲ್ಲಿ, .7ರಂದು ಹಿರಿಯೂರು ನಗರದ ನೆಹರು ಮೈದಾನ ಹತ್ತಿರದ .ಕೃಷ್ಣಪ್ಪ ರೋಟರಿ ಸಭಾ ಭವನ,

.9ರಂದು ಹೊಳಲ್ಕೆರೆ ಪಟ್ಟಣದ ಸಂವಿಧಾನ ಸೌಧ ಪಕ್ಕ, ಗುರುಭವನದಲ್ಲಿ ಹಾಗೂ .10 ಹೊಸದುರ್ಗ ಪಟ್ಟಣದ ತಾಲ್ಲೂಕು ಆಸ್ಪತ್ರೆಯಲ್ಲಿ ನೇತ್ರ ತಪಾಸಣ ಶಿಬಿರ ನಡೆಯಲಿದೆ.

ಹಿರಿಯ ನಾಗರಿಕರ ಗುರುತಿನ ಚೀಟಿ, ಪಾನ್ಕಾರ್ಡ್, ಆಧಾರ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ ಅಥವಾ ಶಾಲಾ ಕಾಲೇಜು ದಾಖಲಾತಿ ಹಾಗೂ ಬಿಪಿಎಲ್ ಪಡಿತರ ಚೀಟಿ ಪ್ರತಿಗಳೊಂದಿಗೆ ಹಿರಿಯ ನಾಗರಿಕರು ಶಿಬಿರಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ವಿಕಲಚೇತನರ ಸಲಹೆ ಮತ್ತು ಮಾಹಿತಿ ಕೇಂದ್ರ ದೂರವಾಣಿ ಸಂಖ್ಯೆ 08194-235284, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರ 08194-220085, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ 08194-220098 ಗೆ ಸಂಪರ್ಕಿಸಬಹುದು ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ವೈಶಾಲಿ.ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";